ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ದಾಳಿ ನಡೆದಿದೆ.
ಸತ್ತವರಲ್ಲಿ ಮೂವರು ಮತ್ತು ಗಾಯಗೊಂಡವರಲ್ಲಿ ನಾಲ್ವರು ಅಫ್ಘಾನ್ ಮೂಲದವರು ಎಂದು ಹೇಳಲಾಗಿದೆ. ಸದ್ಯ ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಈ ಪ್ರಾಂತ್ಯವು ಸ್ವಾತಂತ್ರ್ಯವನ್ನು ಬಯಸುವ ಪ್ರತ್ಯೇಕತಾವಾದಿ ಗುಂಪುಗಳ ಭದ್ರಕೋಟೆಯಾಗಿದೆ.

