ಅಹ್ಮದಾಬಾದ್‌: ಐದು ಅಂತಸ್ತಿನ ಕಟ್ಟಡ ಕುಸಿದಿದ್ದು ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ ಸಿಲುಕಿರುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ.