Bengaluru 22°C
Ad

ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ: ಮೂವರು ಕಾರ್ಮಿಕರ ಸಾವು

ಆಹಾರ ಸಂಸ್ಕರಣಾ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. 

ನವದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮೃತಪಟ್ಟವರನ್ನ ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್ಪಾಲ್ (42) ಎಂದು ಗುರುತಿಸಲಾಗಿದೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ಒಳಗಿದ್ದ ಒಂಬತ್ತು ಜನರನ್ನು ರಕ್ಷಿಸಿ ನರೇಲಾದ ಎಸ್‌ಎಚ್‌ಆರ್‌ಸಿ ಆಸ್ಪತ್ರೆಗೆ ರವಾನಿಸಲಾಗಿತ್ತು.

ಪೈಪ್‌ಲೈನ್‌ಗಳಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಕಿಯು ಕಾರ್ಖಾನೆಯನ್ನು ಆವರಿಸಿದ್ದು ಕೆಲವು ಕಾರ್ಮಿಕರು ಹೊಗೆಯಲ್ಲಿ ಸಿಲುಕಿಕೊಂಡಿದ್ದರು. ಹದಿನಾಲ್ಕು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಪೊಲೀಸರಿಗೆ ಮುಂಜಾನೆ 3.35ಕ್ಕೆ ಕರೆ ಬಂದಿದ್ದು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Ad
Ad
Nk Channel Final 21 09 2023
Ad