Ad

ಕೇಂದ್ರದ ಮಾಜಿ ವಿದೇಶಾಂಗ ಸಚಿವ ಕೆ. ನಟ್ವರ್‌ ಸಿಂಗ್‌ ನಿಧನ

ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಗುರುಗ್ರಾಮ: ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ನಟ್ವರ್‌ ಸಿಂಗ್‌ ಅವರು ಹಲವು ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ.

ನಟ್ವರ್‌ ಸಿಂಗ್‌ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು ಏಕರೂಪದ ವಿದೇಶಾಂಗ ನೀತಿಯನ್ನು ಹೊಂದಿರಬೇಕು ಎಂಬುದು ಅವರ ಅಭಿಪ್ರಾಯವಾಗಿತ್ತು. ದೇಶಕ್ಕೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಿದ ನಟ್ವರ್‌ ಸಿಂಗ್‌ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

https://x.com/tequieremos/status/1822340615260004570?

Ad
Ad
Nk Channel Final 21 09 2023