Bengaluru 29°C

ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಗೋಡೆ ಕುಸಿದು ನಾಲ್ವರು ಮಕ್ಕಳ ಸಾವು

ಇಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕಟ್ಟಡವೊಂದರ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಶಿಥಿಲಗೊಂಡ ಕಟ್ಟಡದ ಗೋಡೆ

ಮಧ್ಯಪ್ರದೇಶ: ಇಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಕಟ್ಟಡವೊಂದರ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಕ್ಕಳು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಶಿಥಿಲಗೊಂಡ ಕಟ್ಟಡದ ಗೋಡೆ ಮಕ್ಕಳ ಮೇಲೆ ಬಿದ್ದಿದೆ. ರೇವಾ ಜಿಲ್ಲೆಯ ಗಢ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು ಅಂಕಿತಾ ಗುಪ್ತಾ (5), ಮಾನ್ಯ ಗುಪ್ತಾ (7), ಸಿದ್ಧಾರ್ಥ್ ಗುಪ್ತಾ (5), ಮತ್ತು ಅನುಜ್ ಪ್ರಜಾಪತಿ (5) ಎಂದು ಅಧಿಕಾರಿಗಳು ಗುರುತಿಸಿದ್ದಾರೆ.


ಸನ್‌ರೈಸ್ ಪಬ್ಲಿಕ್ ಶಾಲೆಯ ಮಕ್ಕಳು ಮನೆಗೆ ಹಿಂದಿರುಗುತ್ತಿದ್ದಾಗ ಗೋಡೆ ಕುಸಿದಿದ್ದು, ಶನಿವಾರ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಅರ್ಧಕ್ಕೆ ಕಾಮಗಾರಿ ನಿಲ್ಲಿಸಿದ ಕಟ್ಟಡದ ಗೋಡೆಯೊಂದು ಕುಸಿದು 4 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.


Nk Channel Final 21 09 2023