ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ದೆಹಲಿ ಪ್ರೇಮ್ ನಗರದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತರನ್ನು ಹಿರಾ ಸಿಂಗ್ (48), ನೀತು ಸಿಂಗ್ (46), ರಾಬಿನ್ (22) ಮತ್ತು ಲಕ್ಷ್ಯ (21) ಎಂದು ಗುರುತಿಸಲಾಗಿದೆ.
ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಮೊದಲ ಮಹಡಿಯಲ್ಲಿ ಮಲಗಿದ್ದರು. ಮೊದಲ ಮಹಡಿಯಲ್ಲಿ ಇರಿಸಲಾಗಿದ್ದ ಇನ್ವರ್ಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಸೋಫಾ ಗೆ ಹಬ್ಬಿದ ಪರಿಣಾಮ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

