Bengaluru 24°C
Ad

ಹೊತ್ತಿಉರಿದ ಗೇಮ್ ಝೋನ್‌ : 24 ಮಂದಿ ಸಜೀವ ದಹನ ,ಮಾಲೀಕ ಅರೆಸ್ಟ್‌

ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 24 ಮಂದಿ ಸಜೀವ ದಹನಗೊಂಡಿದ್ದಾರೆ. ಇಡೀ ಗೇಮ್ ಝೋನ್ ಸುಟ್ಟು ಬೂದಿಯಾಗಿದೆ.

ಗುಜರಾತ್‌: ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 24 ಮಂದಿ ಸಜೀವ ದಹನಗೊಂಡಿದ್ದಾರೆ. ಇಡೀ ಗೇಮ್ ಝೋನ್ ಸುಟ್ಟು ಬೂದಿಯಾಗಿದೆ.

ಈ ಸಂಬಂಧ ಗೇಮ್‌ ಜೋನ್‌ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ವಿರುದ್ಧ ನಿರ್ಲಕ್ಷ್ಯ ಕುರಿತಂತೆ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗಿದೆ. ಇನ್ನು ಮ್ಯಾನೇಜರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಆಟದ ವಲಯದ ಒಂದು ಭಾಗದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ಎರಡು ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೇಮ್ ಝೋನ್ ಬಂದ್ ಆಗಿತ್ತು. ಒಂದು ದಿನದ ನಂತರ ಆಟದ ವಲಯವನ್ನು ಪುನಃ ತೆರೆಯಲಾಗಿದೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ತನಿಖೆ ನಡೆಯಲಿದೆ

ಬೆಂಕಿಯ ಹೊಗೆ 3 ಕಿಲೋಮೀಟರ್ ದೂರದಿಂದ ಗೋಚರಿಸಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ

Ad
Ad
Nk Channel Final 21 09 2023
Ad