Bengaluru 22°C
Ad

ಜಯಾ ಶೆಟ್ಟಿ ಹತ್ಯೆ ಕೇಸ್; ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Chhota Rajan

ಮುಂಬೈ: 2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(MCOCA) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು, ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ರಾಜನ್‌ ಅಪರಾಧಿ ಎಂದು ಘೋಷಿಸಿದರು.

ಜಯಾ ಶೆಟ್ಟಿ ಅವರು ಸೆಂಟ್ರಲ್ ಮುಂಬೈನ ಗಮದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ನಡೆಸುತ್ತಿದ್ದರು. ಮೇ 4, 2001 ರಂದು ಹೋಟೆಲ್‌ನ ಮೊದಲ ಮಹಡಿಯಲ್ಲಿ ರಾಜನ್ ಗ್ಯಾಂಗ್‌ನ ಇಬ್ಬರು ಸದಸ್ಯರು ಜಯಾ ಶೆಟ್ಟಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಹೋಟೆಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

Ad
Ad
Nk Channel Final 21 09 2023
Ad