ನವದೆಹಲಿ: ಜೂನ್ 30, 2026ರ ಒಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಲ್‌ಪಿಜಿ ಸಿಲಿಂಡರ್ ಗ್ರಾಹಕರಿಗೆ ತೈಲ ಮಾರಾಟ ಸಂಸ್ಥೆಗಳು ಮಹತ್ವದ ಗಡುವು ನೀಡಿವೆ.

ಇಂಡೇನ್, ಭಾರತ್ ಗ್ಯಾಸ್ ಮತ್ತು ಎಚ್‌ಪಿ ಗ್ಯಾಸ್ ಬಳಕೆದಾರರು ನಿಗದಿತ ದಿನಾಂಕದೊಳಗೆ ಆಧಾರ್ ಆಧಾರಿತ ದೃಢೀಕರಣ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸೌಲಭ್ಯ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಸಬ್ಸಿಡಿ ತಲುಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.