ಹೊಸದಿಲ್ಲಿ: ಲೋಕಸಭೆಯ ಉಪ ನಾಯಕರನ್ನಾಗಿ ಕಾಂಗ್ರೆಸ್ ಪಕ್ಷವು ಇಂದು ಸಂಸದ ಗೌರವ್ ಗೊಗೊಯ್ ಅವರನ್ನು ನೇಮಿಸಿ ಆದೇಶಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.
ಗೌರವ್ ಗೊಗೊಯ್ ಅವರಲ್ಲದೆ, ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಬಗ್ಗೆ ಸೋನಿಯಾ ಗಾಂಧಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಡಾ ಎಂಡಿ ಜವೈದ್ ಅವರನ್ನು ವಿಪ್ ಗಳಾಗಿ ನೇಮಿಸಲಾಗಿದೆ.

