Bengaluru 27°C
Ad

ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Attempts Suicide

ಮಧ್ಯಪ್ರದೇಶ: ನ್ಯಾಯಾಲಯದ ಆವರಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಅಲ್ಲಿನ ಜಿಲ್ಲಾ ನ್ಯಾಯಾಲಯದ ಕಟ್ಟಡ ಹತ್ತಿ ನಾಲ್ಕನೇ ಮಹಡಿಯಿಂದ ಹಾರಲು ಯತ್ನಿಸಿದ್ದಾಳೆ, ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಇತರೆ ಜನರು ಯುವತಿಯನ್ನು ಕಟ್ಟಡದಿಂದ ಜಿಗಿಯದಂತೆ ತಡೆದಿದ್ದಾರೆ, ನಂತರ ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಯಿತು.ಸದ್ಯ ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆತ್ಮಹತ್ಯೆಯಂತಹ ತಪ್ಪು ನಿರ್ಧಾರಕ್ಕೆ ಕಾರಣಗಳು ತಿಳಿದುಬಂದಿಲ್ಲ. ಈ ಕುರಿತು ತನಿಖೆ ಆರಂಭಿಸಲಾಗಿದೆ.

Ad
Ad
Nk Channel Final 21 09 2023