ಕೇದಾರನಾಥ: ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ.

ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ, ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ? ಹೀಗೇನಾದರೂ ಆದರೆ ಮತ್ತೊಂದು ಹಗರಣ ನಡೆಯಲಿದೆ ಎಂದಿದ್ದಾರೆ.

ಕೇದಾರನಾಥದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇಗುಲ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಅವರ ಈ ಹೇಳಿಕೆ ಬಂದಿದೆ. ದೆಹಲಿಯ ಕೇದಾರನಾಥ ದೇವಾಲಯದ ವಿರುದ್ಧ ಅರ್ಚಕರು ಪ್ರತಿಭಟನೆ ನಡೆಸಿದರು.