ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ತಮ್ಮ ಸರ್ಕಾರ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ.

78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಇಂದಿಗೂ ಮಧ್ಯಮ ವರ್ಗದ ಮಕ್ಕಳು ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ.

ವಿದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಲಕ್ಷ ಕೋಟಿ ಖರ್ಚು ಮಾಡುತ್ತಾರೆ. ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ಒಟ್ಟು ವೈದ್ಯಕೀಯ ಸೀಟುಗಳನ್ನು ಸುಮಾರು 1 ಲಕ್ಷಕ್ಕೆ ಹೆಚ್ಚಿಸಿದೆ ಎಂದು ಹೇಳಿದರು.

‘ಪ್ರತಿ ವರ್ಷ ಸುಮಾರು 25,000 ಯುವಕರು ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುತ್ತಾರೆ ಅನ್ನೋದನ್ನು ಕೇಳಿದಾಗ ನನಗೆ ಆಶ್ಚರ್ಯವಾಗುತ್ತದೆ ಆದ್ದರಿಂದ ನಾವು ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಸಾಲಿನಲ್ಲಿ 75,000 ಹೊಸ ಸೀಟುಗಳನ್ನು ಸೃಷ್ಟಿಸಲು ನಿರ್ಧರಿಸಿದ್ದೇವೆ. ನಾವು ಭಾರತದಲ್ಲಿ ಅಂತಹ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸಲು ಬಯಸುತ್ತೇವೆ, ಯುವಕರು ವಿದೇಶಕ್ಕೆ ಹೋಗಿ ಅಧ್ಯಯನ ಮಾಡುವ ಅಗತ್ಯವಿಲ್ಲ. ವಿದೇಶಿ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಧ್ಯಯನ ಮಾಡಬೇಕೆಂದು ನಾವು ಬಯಸುತ್ತೇವೆ ಎಂದು ಮೋದಿ ಹೇಳಿದರು.