ಹೈದರಾಬಾದ್ : ತೆಲಂಗಾಣದ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನವನ್ನು ಕಡಿತಗೊಳಿಸಿ, ಅದನ್ನು ನಿರ್ಲಕ್ಷ್ಯಕ್ಕೆ ಒಳಗಾದ ಪೋಷಕರಿಗೆ ನೀಡುವ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಘೋಷಿಸಿದ್ದಾರೆ.

ಸರ್ಕಾರಿ ಹುದ್ದೆಗೇರಿ ಅಧಿಕಾರಿಗಳಾದ ಬಳಿಕ ಪೋಷಕರನ್ನು ನಿರ್ಲಕ್ಷಿಸುವ ಅಂತಹ ಸರ್ಕಾರಿ ನೌಕರರ ವೇತನವನ್ನು ಕಡಿತಗೊಳಿಸುವ ಮಸೂದೆಯನ್ನು ತರಲು ರೇವಂತ್ ರೆಡ್ಡಿನೇತೃತ್ವದ ತೆಲಂಗಾಣದ ಕಾಂಗ್ರೆಸ್ ಸರ್ಕಾರ​ ಮುಂದಾಗಿದೆ.