ನವದೆಹಲಿ: ಜುಲೈ 22ರಂದು ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ 6 ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರವು ಪರಿಚಯಿಸಲಿದೆ.
ಲೋಕಸಭೆಯ ಸೆಕ್ರೆಟರಿಯೇಟ್ ಗುರುವಾರ ಸಂಜೆ ಹೊರಡಿಸಿದ ಸಂಸತ್ತಿನ ಬುಲೆಟಿನ್‌ನಲ್ಲಿ ಮಸೂದೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
6 ಮಸೂದೆಗಳು ಹೀಗಿವೆ. . .
1. ಹಣಕಾಸು ಮಸೂದೆ
2. ವಿಪತ್ತು ನಿರ್ವಹಣಾ ಮಸೂದೆ
3. ಬಾಯ್ಲರ್ಗಳ ಮಸೂದೆ
4. ಭಾರತೀಯ ವಾಯುಯಾನ ವಿಧೇಯಕ ಮಸೂದೆ
5. ಕಾಫಿ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ
6. ರಬ್ಬರ್ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ
ಕೇಂದ್ರ ಸರ್ಕಾರವು ಭಾರತೀಯ ವಾಯುಯಾನ ವಿಧೇಯಕ್ 2024 ಅನ್ನು ಪ್ರಸ್ತುತಪಡಿಸುತ್ತದೆ. ಇದು ಅಸ್ತಿತ್ವದಲ್ಲಿರುವ ಏರ್‌ಕ್ರಾಫ್ಟ್ ಕಾಯ್ದೆ 1934 ಅನ್ನು ಬದಲಿಸುತ್ತದೆ. ಇದು ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸುಲಭವಾಗಿ ವ್ಯಾಪಾರ ಮಾಡಲು ನಿಬಂಧನೆಗಳನ್ನು ಒದಗಿಸುತ್ತದೆ.
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಜುಲೈ 23) ಬಜೆಟ್ ಮಂಡಿಸಲಿದ್ದಾರೆ. ಮುಂದಿನ ಸೋಮವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಜುಲೈ 21ರಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ.

