ನವದೆಹಲಿ: ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಮಾತ್ರವಲ್ಲ ಕ್ರೀಡೆಗಳನ್ನು ಬೆಂಬಲಿಸಲು ಮತ್ತು ಹೆಚ್ಚಿನ ಯುವಕರು ಆಟವಾಡಲು ಮತ್ತು ಮಿಂಚುವಂತೆ ಮಾಡಲು ತಮ ಸರ್ಕಾರ ಬದ್ಧವಾಗಿದೆ ಎಂದು ಅವರು ಎಖ್ಸ್ ಮಾಡಿದ್ದಾರೆ.
ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸಂದರ್ಭವಾಗಿದೆ ಎಂದು ಮೋದಿ ಎಕ್ಸ್ ನಲ್ಲಿ ಹೇಳಿದ್ದಾರೆ. ನಮ ಸರ್ಕಾರವು ಕ್ರೀಡೆಗಳನ್ನು ಬೆಂಬಲಿಸಲು ಬದ್ಧವಾಗಿದೆ ಮತ್ತು ಹೆಚ್ಚಿನ ಯುವಕರು ಆಟವಾಡಲು ಮತ್ತು ಮಿಂಚಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದರು.ಮೇಜರ್ ಚಂದ್ ಅವರ ಜನದಿನದಂದು ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.
Greetings on National Sports Day. Today we pay homage to Major Dhyan Chand Ji. It is an occasion to compliment all those passionate about sports and those who have played for India. Our Government is committed to supporting sports and ensuring more youth are able to play and… pic.twitter.com/nInOuIOrpp
— Narendra Modi (@narendramodi) August 29, 2024

