ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದಲ್ಲಿ ಯೋಧರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಈ ಗುಂಡಿನ ಕಾಳಗದಲ್ಲಿ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣಪುರದ ಮಾದ್ ಪ್ರದೇಶ ಮತ್ತು ದಾಂತೇವಾಡ ಗಡಿ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ಯೋಧರಿಗೆ ಮಾಹಿತಿ ಸಿಕ್ಕಿತ್ತು. ಇದರ ನಂತರ ಜಂಟಿ ಪೊಲೀಸ್ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಶೋಧದ ವೇಳೆ ಶುಕ್ರವಾರ ಮಧ್ಯಾಹ್ನ ನಾರಾಯಣಪುರ-ದಂತೇವಾಡ ಪೊಲೀಸರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯಿತು.
ಎನ್‌ಕೌಂಟರ್‌ನಲ್ಲಿ ಹತರಾದ ನಕ್ಸಲೀಯರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಸದ್ಯ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಎಲ್ಲಾ ಯೋಧರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಕ್ಸಲ್ ಕ್ಯಾಂಪ್ ಧ್ವಂಸಗೊಳಿಸಿದ್ದ ಭದ್ರತಾ ಪಡೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿತ್ತು.

