ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್‌ಪಿಸಿ, ಸಿಪಿಐ (ಮಾವೋವಾದಿ) ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗುರುವಾರ (ಸೆ.4) ಮನಾಟು ಪೊಲೀಸ್ ಠಾಣಾ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.  ಗಾಯಾಳುವನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.