ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಉಗ್ರರು ಹಾಗೂ ಸೇನೆಯ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ, ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಆ ಪ್ರದೇಶಕ್ಕೆ ಹೆಚ್ಚುವರಿ ಯೋಧರನ್ನು ಕಳುಹಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ವಕ್ತಾರರು ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ, ಆದರೆ ಹೆಚ್ಚಿನ ಮಾಹಿತಿಗಾಗಿ ಇನ್ನೂ ಕಾಯಲಾಗುತ್ತಿದೆ ಎಂದು ಹೇಳಿದರು.

