ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರಿಗೆ ಗಾಯಗಳಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಜಿಲ್ಲೆಯ ಕುಮ್ಕಾರಿ ಪ್ರದೇಶದಲ್ಲಿ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟರ್ ಪ್ರಾರಂಭವಾಯಿತು ಎನ್ನಲಾಗಿದೆ.
ಈ ವೇಳೆ ಸೈನಿಕರು ಗಾಯಗೊಂಡರು. ಇದು ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್. ಇಲ್ಲಿ ಭಯೋತ್ಪಾದಕರ ದಂಡು ಬೀಡು ಬಿಟ್ಟಿದೆ ಎನ್ನುವ ಖಚಿತ ಮಾಹಿತಿ ಮೇರೆ ಸೈನಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

