ನವದೆಹಲಿ: ಜೆಟ್ ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹಜ್ ಯಾತ್ರೆಯ ವಿಮಾನ ದರವನ್ನು 10,000 ರೂ. ಹೆಚ್ಚಳ ಮಾಡಲಾಗಿದೆ.
ಈ ವರ್ಷ ಹಜ್ ಸಮಿತಿಯು ಪ್ರತಿ ಯಾತ್ರಿಕರಿಗೆ 10,000 ರೂ.ಗಳಷ್ಟು ವಿಮಾನ ದರವನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ. ಈ ನಡೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ದರ ಏರಿಕೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಹೋರಾಟ, ಅಮೆರಿಕ ಮತ್ತು ಇಸ್ರೇಲ್‌ನ ಇರಾನ್ ವಿರುದ್ಧದ ಯುದ್ಧ, ವಿಶ್ವಾದ್ಯಂತ ಕಚ್ಚಾ ತೈಲ ಪೂರೈಕೆ ವ್ಯವಸ್ಥೆಯನ್ನೇ ಬಡಮೇಲು ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಶಾಸನಬದ್ಧ ಸಂಸ್ಥೆಯಾದ ಹಜ್ ಸಮಿತಿಯು, ‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನಿಂದ ಉಂಟಾಗುವ ಅಸಾಧಾರಣ ಸಂದರ್ಭಗಳು’ ಎಂದು ಉಲ್ಲೇಖಿಸುವ ಸುತ್ತೋಲೆಯನ್ನು ಹೊರಡಿಸಿದೆ. ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾಗೆ ಪ್ರಯಾಣಿಸುವ ಯಾತ್ರಿಕರಿಗೆ ವಿಮಾನ ದರಗಳಲ್ಲಿ ಒಂದು ಬಾರಿ ಪರಿಷ್ಕರಣೆ ಮಾಡುವುದಾಗಿ ತಿಳಿಸಿದೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿರುವುದರಿಂದ, ಮೂಲ ದರ ಪರಿಷ್ಕರಣೆಗಾಗಿ ವಿಮಾನಯಾನ ಸಂಸ್ಥೆಗಳಿಂದ ಒತ್ತಾಯ ಕೇಳಿಬಂದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ವರ್ಷ ಪ್ರಯಾಣ ಬೆಳೆಸಲು ಬಯಸುವವರು ಮೇ 15 ರೊಳಗೆ ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕು.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಕ್ಸ್ ಪೋಸ್ಟ್‌ನಲ್ಲಿ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಅಸಂಖ್ಯಾತ ಕುಟುಂಬಗಳಿಗೆ ವರ್ಷಕ್ಕೊಮ್ಮೆ ಪವಿತ್ರ ಹಜ್ ಯಾತ್ರೆ ಮಾಡುವ ಆಸೆ ಇರುತ್ತದೆ. ಆ ಭಾವನೆಯನ್ನು ನಾನು ಗೌರವಿಸುತ್ತೇನೆ. ಆದರೆ, ಪ್ರಸ್ತುತ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ಎಟಿಎಫ್ ಬೆಲೆಗಳಲ್ಲಿ ಜಾಗತಿಕವಾಗಿ ತೀವ್ರ ಏರಿಕೆ ಕಂಡುಬಂದಿದೆ.

