Ad

ಸ್ವಾತಂತ್ರ್ಯ ದಿನ : ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

ಸ್ವಾತಂತ್ರ್ಯ ದಿನ: ಬಿಜೆಪಿಯಿಂದ ಭಾರತದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನ

ನವದೆಹಲಿ: ಸ್ವಾತಂತ್ರ ದಿನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ, . ಇದಕ್ಕೂ ಮುಂಚಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ಅನುಸರಿಸಿ ಮುಂದಿನ ವಾರ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಷ್ಟ್ರದಾದ್ಯಂತ ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ.

ಜುಲೈ 28ರಂದು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಪ್ರಸಾರದಲ್ಲಿ ಪಿಎಂ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾತನಾಡಿದ್ದರು. harghartiranga.com ವೆಬ್‌ಸೈಟ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಅಪ್‌ಲೋಡ್ ಮಾಡುವಂತೆ ಜನರ ಬಳಿ ಮನವಿ ಮಾಡಿದ್ದರು.

ಆಗಸ್ಟ್ 11ರಿಂದ ಆಗಸ್ಟ್ 13ರವರೆಗೆ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸಲಿದೆ. ಆಗಸ್ಟ್ 12, 13 ಮತ್ತು 14ರಂದು ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಲಾಗುವುದು. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು.

Ad
Ad
Nk Channel Final 21 09 2023