ನವದೆಹಲಿ: ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹರಿಯಾಣದ ರೋಹ್ಟಕ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆಗಾಗಿ ಪಕ್ಷದ ‘ಸಂಕಲ್ಪ ಪತ್ರ’ (ಪ್ರಣಾಳಿಕೆ) ಬಿಡುಗಡೆ ಮಾಡಿದರು. ಈ ವೇಳೆ ಹರಿಯಾಣದ ಸಿಎಂ ನಯಾಬ್ ಸಿಂಗ್ ಸೈನಿ, ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಉಪಸ್ಥಿತರಿದ್ದರು.
90 ಸದಸ್ಯ ಬಲದ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಪ್ರಣಾಳಿಕೆಯಂತೆ ಲಾಡೋ ಲಕ್ಷ್ಮಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ 2,100 ರೂ. ನೀಡಲಾಗುತ್ತದೆ. ಐಎಂಟಿ ಖಾರ್ಖೋಡಾ ಮಾದರಿಯಲ್ಲಿ 10 ಕೈಗಾರಿಕಾ ನಗರಗಳನ್ನು ನಿರ್ಮಿಸಲಾಗುವುದು ಮತ್ತು ಪ್ರತಿ ನಗರಕ್ಕೆ 50,000 ಸ್ಥಳೀಯ ಯುವಕರಿಗೆ ಉದ್ಯೋಗಗಳನ್ನು ಒದಗಿಸಲು ಉದ್ಯಮಿಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು.
Ad