ನವದೆಹಲಿ: ಭಾರತದ ಚುನಾವಣಾ ಆಯೋಗವು (ECI) ಹರಿಯಾಣ ಅಸೆಂಬ್ಲಿ ಚುನಾವಣೆಯ ಮತದಾನದ ದಿನಾಂಕದಲ್ಲಿ ಬದಲಾವಣೆಯನ್ನು ಘೋಷಿಸಿದೆ. ಅಕ್ಟೋಬರ್ 1 ರ ಬದಲಾಗಿ ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭೆ ಚುನಾವಣೆ ನಡೆಯದೆ. ಇನ್ನು ಜಮ್ಮು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್ 4ರ ಬದಲಿಗೆ ಅಕ್ಟೋಬರ್ 8ಕ್ಕೆ ಬದಲಾಯಿಸಲಾಗಿದೆ. ಅಸೋಜ್ ಅಮವಾಸ್ಯೆ ಹಬ್ಬವನ್ನು ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ದಿನಾಂಕಗಳನ್ನು ಪರಿಷ್ಕರಿಸುವ ನಿರ್ಧಾರವನ್ನು ಮಾಡಲಾಗಿದೆ.

Image: Web
