ನವದೆಹಲಿ : ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯು ಹರಿಯಾಣದಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.
ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು 48 ಕ್ಷೇತ್ರಗಳಲ್ಲಿ ಗೆದ್ದರೆ, ಕಾಂಗ್ರೆಸ್ 37 ಮತ್ತು ಇಂಡಿಯಾ ಕೂಟದ INLD-2 ಹಾಗೂ ಇತರ-3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಜಮ್ಮು -ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನ ಹಿಂಪಡೆದ ನಂತರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, 90 90 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಗೆ ಭಾರೀ ಆಘಾತ ನೀಡಿದೆ. J &K ನಲ್ಲಿ ಬಿಜೆಪಿ-29 ಸ್ಥಾನಗಳಲ್ಲಿ ಗೆದ್ದು ಬೀಗಿದರೆ, ಕಾಂಗ್ರೆಸ್-6, ಇಂಡಿಯಾ ಒಕ್ಕೂಟದ ಜೆಕೆಎನ್-42, ಜೆಕೆಪಿಡಿಪಿ-3, ಜೆಒಇಸಿ-1, ಸಿಪಿಐ(ಎಂ)-1, ಎಎಪಿ-1, ಇತರ-7 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

