ನವದೆಹಲಿ: ನೀಟ್-ಯುಜಿ ಮತ್ತು ಯುಜಿಸಿ- ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಇಂದು (ಶನಿವಾರ) ರಾತ್ರಿ ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗೆ ಒಳಪಡಿಸಲಾಗಿದೆ.
ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.

