Ad

ನೀಟ್, ನೆಟ್​ ಅಕ್ರಮ ಪ್ರಕರಣ : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮುಖ್ಯಸ್ಥ ವಜಾ

ನೀಟ್-ಯುಜಿ ಮತ್ತು ಯುಜಿಸಿ- ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಇಂದು (ಶನಿವಾರ) ರಾತ್ರಿ ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ.

ನವದೆಹಲಿ: ನೀಟ್-ಯುಜಿ ಮತ್ತು ಯುಜಿಸಿ- ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಇಂದು (ಶನಿವಾರ) ರಾತ್ರಿ ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಗೆ ಒಳಪಡಿಸಲಾಗಿದೆ.

Ad
300x250 2

ನೀಟ್, ನೆಟ್ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಗೇ, ಜುಲೈ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.

Ad
Ad
Nk Channel Final 21 09 2023
Ad