Bengaluru 23°C
Ad

ಈ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ, ಪ್ರವಾಹದ ಎಚ್ಚರಿಕೆ!

ಗುಜರಾತ್, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುಜರಾತ್, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಲ್ಲಿ ಹುಟ್ಟುವ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೇಪಾಳದ ಗಡಿಯಲ್ಲಿರುವ ಬಿಹಾರ ಮತ್ತು ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಅಸ್ಸಾಂ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರವೂ ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ, ಉತ್ತರ ಭಾರತದ ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಸಿಕ್ಕಿಂ ಮತ್ತು ಮಧ್ಯಪ್ರದೇಶದ ಪೂರ್ವ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇತ್ತ ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಸಿಡಿಲಿನ ಎಚ್ಚರಿಕೆಯನ್ನೂ ಸಹ ನೀಡಲಾಗಿದೆ.

Ad
Ad
Nk Channel Final 21 09 2023