Bengaluru 21°C
Ad

ಬವ್‌ಧಾನ್‌ನಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃತ್ಯು

ಇಲ್ಲಿನ ಬವ್‌ಧಾನ್‌ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ನಡೆದಿದೆ.

ಪುಣೆ: ಇಲ್ಲಿನ ಬವ್‌ಧಾನ್‌ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ನಡೆದಿದೆ.

ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎನ್ನುವುದು ಸ್ಪಷ್ಟವಾಗಿದೆ.ಬೆಳಗ್ಗೆ 6.45ರ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Ad
Ad
Nk Channel Final 21 09 2023