Ad

ಮೂರನೇ ಬಾರಿ ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣವಚನ ಸ್ವೀಕಾರ

Hemanth

ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು.

Ad
300x250 2

ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಕೂಡ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು.

ರಾಜ್ಯಪಾಲರಿಂದ ಆಹ್ವಾನ ಸ್ವೀಕರಿಸಿದ ನಂತರ ಸಾಮಾಜಿಕ ಮಾಧ್ಯಮ X ನಲ್ಲಿ ಸಂತೋಷ ವ್ಯಕ್ತಪಡಿಸಿದ ಹೇಮಂತ್ ಸೊರೆನ್ ಅವರ ಪತ್ನಿ ಮತ್ತು ಶಾಸಕಿ ಕಲ್ಪನಾ ಸೊರೆನ್, ಅಂತಿಮವಾಗಿ ಪ್ರಜಾಪ್ರಭುತ್ವವು ಗೆದ್ದಿದೆ ಎಂದು ಹೇಳಿದ್ದರು.

Ad
Ad
Nk Channel Final 21 09 2023
Ad