ಶಾಲೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಟೀಕಿಸಿದ್ದಾರೆ.

ಈ ತೀರ್ಪನ್ನು ‘ಇಸ್ಲಾಂ ಮೇಲಿನ ದಾಳಿ’ ಎಂದು ಬಣ್ಣಿಸಿದ ಓವೈಸಿ, ಇಸ್ಲಾಂಗೆ ಯಾವುದು ಅಗತ್ಯ ಮತ್ತು ಯಾವುದು ಅನಗತ್ಯ ಎಂಬುದನ್ನು ನಿರ್ಧರಿಸುವ ಕೆಲಸ ನ್ಯಾಯಾಧೀಶರದ್ದಲ್ಲ ಎಂದು ಹೇಳಿದರು.