ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಮೊದಲ ಭೂಕುಸಿತವು ಸುಮಾರು 2 ಗಂಟೆಗೆ ಪ್ರದೇಶಕ್ಕೆ ಅಪ್ಪಳಿಸಿತು. ನಂತರ, ಜಿಲ್ಲೆಯು ಮುಂಜಾನೆ 4.10 ರ ಸುಮಾರಿಗೆ ಮತ್ತೊಂದು ಭೂಕುಸಿತ ಸಂಭವಿಸಿದೆ. ವಯನಾಡ್ ಜಿಲ್ಲೆಯ ಅಧಿಕಾರಿಗಳ ಪ್ರಕಾರ ತೊಂಡರ್ನಾಡ್ ಗ್ರಾಮದಲ್ಲಿ ವಾಸಿಸುವ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತವೊಂದರಲ್ಲಿ ಸಾವನ್ನಪ್ಪಿದೆ.

ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.

ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್, ನಿಯಂತ್ರಣ ಕೊಠಡಿಯನ್ನು ತೆರೆದಿದೆ ಎಂದು ಅವರು ಹೇಳಿದರು. ತುರ್ತು ಸಹಾಯದ ಅಗತ್ಯವಿರುವವರು ಈ ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು ,  9656938689 ಮತ್ತು 8086010833. ಎರಡು IAF ಹೆಲಿಕಾಪ್ಟರ್‌ಗಳು Mi-17 ಮತ್ತು ALH ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಸೂಲೂರಿನಿಂದ ಹೊರಟಿವೆ.