ಹೈದರಾಬಾದ್:‌ ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ ರಣಕಣವು ಈ ಬಾರಿ ಭಾರಿ ಕುತೂಹಲ ಸೃಷ್ಟಿಸಿದ್ದು, ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಕಣಕ್ಕಿಳಿದಿದ್ದು, ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸಿದ್ದರು. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದರು.

ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿರುವ ಮಾಧವಿ ಲತಾ ಅವರು ಗೆಲುವು ಸಾಧಿಸಿದರೆ ಇತಿಹಾಸ ಸೃಷ್ಟಿಸಲಿದ್ದಾರೆ. ಹೈದರಾಬಾದ್‌ ಲೋಕಸಭೆ ಚುನಾವಣೆ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರ ಗಮನವಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಅಸಾದುದ್ದೀನ್‌ ಓವೈಸಿ ಅವರು 2.6 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು.