ಉತ್ತರ ಪ್ರದೇಶ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿ ನಗರದಲ್ಲಿ ನಡೆದಿದೆ.
ಇಕ್ಸಾಲ್ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಸದಸ್ಯರ ಕಿರುಚಾಟ ಕೇಳಿ ಜ್ವಾಲೆಯ ತೀವ್ರತೆಯನ್ನು ನೋಡಿ ಸ್ಥಳೀಯರು ನೆರವಿಗೆ ಮುಂದಾಗಿದ್ದು, ಅಷ್ಟರಲ್ಲಾಗಲೇ 6 ಮಂದಿ ಮೃತಪಟ್ಟಿದ್ದಾರೆ.
ಇನ್ನು,ಗಾಯಾಳುಗಳನ್ನು ಛಾವಣಿಯ ಮೂಲಕ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ವಸ್ತುಗಳು ಕರಕಲಾಗಿದೆ. ಅಕ್ಕಪಕ್ಕದ ಮನೆಗೂ ಹಾನಿಯಾಗಿದೆ.

