ಲಕ್ನೋ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಭಾನುವಾರ ಮುಂಜಾನೆ ಕುಟುಂಬಸ್ಥರು ಮಲಗಿದ್ದ ಸಂದರ್ಭ ಅಗ್ನಿ ಅವಘಡ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಮೃತರನ್ನು ಗುಲ್ಬಹರ್ (32) ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಪುತ್ರರು ಎಂದು ಗುರುತಿಸಲಾಗಿದೆ. ಅದೇ ಮನೆಯಲ್ಲಿ ವಾಸಿಸುತ್ತಿದ್ದ ಸಂಬಂಧಿಕರ ಮಗ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.