ಜಾರ್ಖಂಡ್: ಇಂದು ಮುಂಜಾನೆ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಹಳಿತಪ್ಪಿದ್ದು, ಕನಿಷ್ಠ ಐದರಿಂದ ಆರು ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ಮುಂಜಾನೆ 3.43 ರ ಸುಮಾರಿಗೆ ಈ ಘಟನೆ ನಡೆದಿದೆ.

ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿ ಎದುರಿನಿಂದ ಹಾದು ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಮೇಲೆ ಪರಿಣಾಮ ಬೀರಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.