ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದ ಬಿಜೆಪಿ ಹಿರಿಯ ನಾಯಕಿ ಸ್ಮೃತಿ ಇರಾನಿ  ಅವರು ತಮ್ಮ ಸೋಲಿನ ಬಗ್ಗೆ ಮಾತನಾಡಿದ್ದಾರೆ.

ಇದು ಗೆದ್ದವರನ್ನು ಅಭಿನಂದಿಸುವ ಸಮಯ, ನಾನು ಅಮೇಥಿಯಲ್ಲಿ ನನ್ನ ಸೇವೆಯನ್ನು ಮುಂದುವರೆಸುತ್ತೇನೆ. ಕ್ಷೇತ್ರ ಮತ್ತು ಪಕ್ಷದ ಸೇವೆಯಲ್ಲಿ ಅತ್ಯಂತ ಸಮರ್ಪಣೆ ಮತ್ತು ನಿಷ್ಠೆಯಿಂದ ದುಡಿದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ .

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರಗಳು 30 ವರ್ಷಗಳ ಬಾಕಿ ಉಳಿದಿರುವ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಸ್ಮೃತಿ ಇರಾನಿ 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು 55 ಸಾವಿರ ಮತಗಳಿಂದ ಸೋಲಿಸಿದ್ದರು.