ನವದೆಹಲಿ: ಎಲ್ಲರ ಚಿತ್ತ 4ರ ಫಲಿತಾಂಶದತ್ತ ನೆಟ್ಟಿದ್ದು,ನಿನ್ನೆಯಷ್ಟೇ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಸಮೀಕ್ಷೆಯಲ್ಲಿ ಎನ್ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ ಇದರಬೇನಲ್ಲೇ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯೊಬ್ಬರು ಹೇಳಿಕೆಯೊಂದನ್ನು ನೀಡಿದ್ದಾರೆ.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್ ಭಾರ್ತಿ ಚುನಾವಣೋತ್ತರ ಸಮೀಕ್ಷೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಿ. ಜೂನ್ 4 ರಂದು ಫಲಿತಾಂಶ ತಲೆಕೆಳಕಾಗುತ್ತದೆ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದರು.
ದೆಹಲಿಯ ಎಲ್ಲಾ ಏಳು ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ. ಮೋದಿಯ ಭಯದಿಂದಾಗಿ ಎಕ್ಸಿಟ್ ಪೋಲ್‌ಗಳು ಸೋಲುವುದನ್ನು ತೋರಿಸಲು ಸಾಧ್ಯವಿಲ್ಲ ಎಂದರು. ಜೂನ್ 4 ರಂದು ನಿಜವಾದ ಫಲಿತಾಂಶ ಬರುವವರೆಗೆ ನಾವೆಲ್ಲರೂ ಕಾಯಬೇಕು. ಜನರು ಬಿಜೆಪಿ ವಿರುದ್ಧ ಭಾರಿ ಮತ ಹಾಕಿದ್ದಾರೆ ಎಂದು ಹೇಳಿದರು.

