ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸಿಬಿಐನಿಂದ ಈಗ ಬಂಧನಕ್ಕೆ ಒಳಗಾಗಿದ್ದಾರೆ.

ಈಗಾಗಲೇ ಅಕ್ರಮ ಹಣ ವರ್ಗಾವಣೆ ಕೇಸ್‌ ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಬಂಧನಕ್ಕೆ ಒಳಗಾಗಿ ತಿಹಾರ್‌ ಜೈಲಿನಲ್ಲಿ ಇದ್ದಾರೆ. ಸಿಬಿಐ ಸೋಮವಾರ ತಿಹಾರ್‌ ಜೈಲಿನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಕಳೆದ ವಾರ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅನುಮತಿ ಕೋರಿತ್ತು. ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಮತ್ತಷ್ಟು ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಸಿಬಿಐ ಕೋರ್ಟ್‌ಗೆ ತಿಳಿಸಿದೆ.