ದೆಹಲಿ : ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಯುವ ಸ್ನಾತಕೋತ್ತರ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ನಡೆದ ಕೊಲೆ ಖಂಡಿಸಿ ವೈದ್ಯರು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದ್ದಾರೆ. ಇದರ ನಡುವೆಯೇ ಭಾರತೀಯ ವೈದ್ಯಕೀಯ ಸಂಘ ಶನಿವಾರ ಪ್ರಧಾನಿ ಪ್ರಧಾನಿ ಮೋದಿ ಯವರಿಗೆ ಪತ್ರ ಬರೆದು ಬೇಡಿಕೆಗಳನ್ನು ಮುಂದಿಟ್ಟಿದೆ.
ಪತ್ರಿಕಾ ಪ್ರಕಟಣೆಯಲ್ಲಿ ತಮ್ಮ ಬೇಡಿಕೆ ಮುಂದಿರಿಸಿದ ಐಎಂಎ, “ವೈದ್ಯರು ವಿಶೇಷವಾಗಿ ಮಹಿಳೆಯರು ವೃತ್ತಿಯ ಸ್ವರೂಪದಿಂದಾಗಿ ಹಿಂಸೆಗೆ ಗುರಿಯಾಗುತ್ತಾರೆ. ಆಸ್ಪತ್ರೆಗಳು ಮತ್ತು ಕ್ಯಾಂಪಸ್‌ಗಳ ಒಳಗೆ ವೈದ್ಯರ ಸುರಕ್ಷತೆಯನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಹೇಳಿದೆ.
Appeal to Hon'ble Prime Minister, Shri Narendera Modi Ji pic.twitter.com/1OcPSbL8Va
— Indian Medical Association (@IMAIndiaOrg) August 17, 2024