ಆಂಧ್ರ ಪ್ರದೇಶ : ಕೊರೊನಾ ಮತ್ತೆ ಆರ್ಭಟಿಸೋಕೆ ಶುರುಮಾಡಿದ್ದು, ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.
ದೇಶದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್ ಕೇಸ್ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಧ್ರ ಸರ್ಕಾರ ಕ್ರಮ ಕೈಗೊಂಡಿದೆ.

