ಗುಜರಾತ್‌: ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್‌ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್​ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

ಹೆಲಿಕಾಪ್ಟರ್‌ನಲ್ಲಿ ನಾಲ್ವರು ಜನರಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ಅವಶೇಷಗಳೂ ಪತ್ತೆಯಾಗಿವೆ. ರಕ್ಷಿಸಲ್ಪಟ್ಟ ವ್ಯಕ್ತಿಯೂ ಡೈವರ್​ ಆಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.

ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ಹಡಗಿನಿಂದ ಸಹಾಯಕ್ಕಾಗಿ ಸಂದೇಶ ಕಳುಹಿಸಿದಾಗ ಈ ಅವಘಡ ಸಂಭವಿಸಿದೆ ಎಂದು ಕೋಸ್ಟ್ ಗಾರ್ಡ್ ಹೇಳಿದೆ. ಹಡಗಿನಿಂದ ಜನರನ್ನು ಸ್ಥಳಾಂತರಿಸಬೇಕಾಗಿತ್ತು ಮತ್ತು ಈ ಸಮಯದಲ್ಲಿ, ಹೆಲಿಕಾಪ್ಟರ್ ಅಲ್ಲಿಗೆ ತಲುಪಿದಾಗ, ಪತನವಾಗಿದೆ. ಸದ್ಯ ನಾಪತ್ತೆಯಾಗಿರುವ ಪೈಲೆಟ್‌ ಮತ್ತು ಡೈವರ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ