ಕೋಟಾ: ಭಾರತ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಬದಲು, ಅವರನ್ನು ನಿರಾಕರಿಸುವ ವ್ಯವಸ್ಥೆಯಾಗಿದೆ.
ಇದೊಂದು ಸುಲಿಗೆಯಂತ್ರವಾಗಿ ಮಾರ್ಪಟ್ಟಿದೆ. ವೃತ್ತಿ ಮಾರ್ಗಗಳನ್ನು ಸೃಷ್ಟಿಸುತ್ತೇವೆ ಎಂದು ನೀಟ್, ಜೆಇಇ, ಯುಪಿಎಸ್‌ಸಿಯಂತ ಪರೀಕ್ಷೆಗಳನ್ನು ನಡೆಸುತ್ತಿದೆ. ಇವುಗಳ ಮೂಲಕ ಹಣ ಸಂಪಾದಿಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಾರ್ಷಿಕವಾಗಿ 22 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಾರೆ. 1 ಲಕ್ಷಕ್ಕೂ ಕಡಿಮೆ ವಿದ್ಯಾರ್ಥಿಗಳು ಮಾತ್ರ ಆಯ್ಕೆಯಾಗುತ್ತಾರೆ ಎಂದು ಹೇಳಿದ್ದಾರೆ.

