Bengaluru 22°C
Ad

ʼಮೋದಿಯ ಪದಗ್ರಹಣ ಸಮಾರಂಭದ ಬದಲು, ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆʼ

ತಾನು ಮೋದಿ ಅವರ​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಕಾಂಗ್ರೆಸ್​ ಸಂಸದ ಶಶಿ ತರೂರ್ ಲೇವಡಿ ಮಾಡಿದ್ದಾರೆ.

ನವದೆಹಲಿ: ತಾನು ಮೋದಿ ಅವರ​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಕಾಂಗ್ರೆಸ್​ ಸಂಸದ ಶಶಿ ತರೂರ್ ಲೇವಡಿ ಮಾಡಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಶಶಿ ತರೂರ್​, ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್​ ಪಂದ್ಯವನ್ನು ವೀಕ್ಷಿಸುತ್ತೇನೆ.

ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ಅದರಲ್ಲೂ ಭಾರತ ವಿರೋಧಿ ಮನಸ್ಥಿತಿಯ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳುವ ಮೂಲಕ ಮೋದಿಗೆ ಟಾಂಗ್​ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಶಶಿ ತರೂರ್ ಹೇಳಿದ್ದಾರೆ. ತರೂರ್​ ಹೇಳಿಕೆಗೆ ಪರ-ವಿರೋಧ ವ್ಯಕ್ತವಾಗಿದೆ.

 

 

 

 

Ad
Ad
Nk Channel Final 21 09 2023
Ad