ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡುವ ಭರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ಈ ಹಿನ್ನಲೆ ರಾಹುಲ್ ವಿರುದ್ಧ ಗುವಾಹಟಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಈ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯ ದಿನಾಂಕವನ್ನು ಭಾರತದ ನಿಜವಾದ ಸ್ವಾತಂತ್ರ್ಯ ಎಂದು ಆಚರಿಸಬೇಕು ಎಂದು ಹೇಳಿದ್ದ ಆರ್ ಎಸ್ ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ರಾಹುಲ್ ಗಾಂಧಿ ಎಡವಟ್ಟು ಮಾಡಿಕೊಂಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಕಾಂಗ್ರೆಸ್ ನ ಹೊಸ ಪ್ರಧಾನ ಕಚೇರಿ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್ ಎಸ್ ಎಸ್ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ, ಮತ್ತು ನಾವು ಈಗ ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಹೇಳಿದ್ದರು.
ಇದೀಗ ಈ ಸಂಬಂಧ ಮೊನ್ಜಿತ್ ಚೇಟಿಯಾ ಎಂಬುವವರು ಗುವಾಹಟಿಯ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಿಎನ್ಎಸ್ ನ ಸೆಕ್ಷನ್ 152 ಮತ್ತು 197 (1) ಡಿ ಅಡಿಯಲ್ಲಿ ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗಾಗಿ ಎಫ್ಐಆರ್ ದಾಖಲಿಸಲಾಗಿದೆ.

