ಇಂಫಾಲ್ : ಮಣಿಪುರದ ಪೊಲೀಸ್ ಮುಖ್ಯಸ್ಥರನ್ನು ಪದಚ್ಯುತಗೊಳಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಪ್ರತಿಭಟನಾ ಮೆರವಣಿಗೆಯ ನಡುವೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರಿಂದ ಮಣಿಪುರ ಸರ್ಕಾರ ಮಂಗಳವಾರ ಐದು ದಿನಗಳ ಕಾಲ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ.
ಸರ್ಕಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ತೌಬಲ್‌ನಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಹಿಂಸಾಚಾರ ಭುಗಿಲೆದ್ದಿದ್ದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅತ್ಯಾಧುನಿಕ ಡ್ರೋನ್ ಮತ್ತು ರಾಕೆಟ್ ದಾಳಿಯ ನಂತರ ಪ್ರತಿಭಟನೆ ಭುಗಿಲೆದ್ದಿತು. ಮಣಿಪುರದಲ್ಲಿ ಡ್ರೋನ್ ಮತ್ತು ರಾಕೆಟ್ ದಾಳಿ ಸೇರಿದಂತೆ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದು, 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
Ad