Bengaluru 21°C
Ad

ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ವಿಶ್ವ ನಾಯಕರಿಗೆ ಆಹ್ವಾನ

Pm

ದೆಹಲಿ: ಪ್ರಧಾನಿ ನರೇಂದ್ರ ಮೋ ಅವರು ಜೂ5ರಂದು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದಾರೆ.

ಇದರ ಜತೆಗೆ ಎನ್​​ಡಿಎ ಸಭೆಯನ್ನು ನಡೆಸಿ ಎನ್​​ಡಿಎ ನಾಯಕರ ಸರ್ವಾನುಮತದ ಮೂಲಕ ಎನ್​​ಡಿಎ ನಾಯಕನಾಗಿ ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್​​ ಕರೆ ಮೂಲಕ ತಿಳಿಸಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

Ad
Ad
Nk Channel Final 21 09 2023
Ad