ಹೊಸದಿಲ್ಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ, “ಪಶ್ಚಿಮ ಬಂಗಾಳದಲ್ಲಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಕದ್ದಿದೆ. ಇದು ಸ್ಪಷ್ಟ ಚುನಾವಣಾ ಅಕ್ರಮ. ಈ ಬಗ್ಗೆ ಮಮತಾ ಬ್ಯಾನರ್ಜಿ ಅವರ ಅಭಿಪ್ರಾಯಕ್ಕೆ ನಾವು ಸಹಮತವಾಗಿದ್ದೇವೆ,” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

