ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ.
ಹಲ್ಲೆ ಪ್ರಕರಣದಲ್ಲಿ ಮೇ 18ರಂದು ಬಿಭವ್ ಕುಮಾರ್ ಅವರನ್ನು ಬಂಧಿಸಲಾಗಿತ್ತು.ಬಿಭವ್ ಕುಮಾರ್ ಅವರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಇದೀಗ ಬಿಭವ್ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದ್ದು, ಜೂನ್ 22ರಂದು ಅವರನ್ನು ಹಾಜರುಪಡಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಲಾಯಿತು.
ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

