ಕೇರಳ: ದೇವರ ನಾಡು ಕೇರಳದಲ್ಲಿ ಮಳೆರಾಯ ಆಗಾಗ ಬಂದು ಕಣ್ಣಾ ಮುಚ್ಚಾಲೆ ಆಟ ಆಡ್ತಿದ್ದ. ಆದರೆ ಹಲವು ಕಡೆಗಳಲ್ಲಿ ಮಳೆರಾಯನ ಸಿಂಚನ ರೈತರ ಮೊಗದಲ್ಲಿ ಖುಷಿ ತರಿಸಿದ್ರೆ, ಇನ್ನೂ ಹಲವೆಡೆ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿ ಮಾಡಿದೆ.

ಜೂನ್​ 1ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಿದೆ. ಆದರೆ ಅದಕ್ಕೂ ಮುನ್ನ ದೇವರನಾಡಲ್ಲಿ ವರುಣನ ರುದ್ರತಾಂಡವ ಶುರುವಾಗಿದೆ. ಮುಂಗಾರು ಪೂರ್ವ ವರುಣಾರ್ಭಟಕ್ಕೆ ಕೇರಳದಲ್ಲಿ ಜಲ ಕಂಟಕ ಎದುರಾಗಿದೆ.

— Harish M (@chnmharish) May 28, 2024

 

ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಗಳೆಲ್ಲ ಜಲಾವೃತವಾಗಿವೆ. ರಸ್ತೆಗಳಲ್ಲಿ ಮಳೆ ನೀರು ಜೊತೆ ಮರಗಳು ಕಸ-ಕಡ್ಡಿಗಳು ರಸ್ತೆಯಲ್ಲಿ ಬಿದ್ದಿವೆ. ಅಷ್ಟೆಯಲ್ಲ ಈ ರಸ್ತೆಗಳಲ್ಲಿ ವಾಹನಗಳು ಚಲಿಸಲು ಆಗುತ್ತಿಲ್ಲ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಇನ್ನು ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಸಂಚಾರ ಅಸ್ತವ್ಯವಸ್ತಗೊಂಡಿದೆ. ಮಳೆಯಿಂದಾಗಿ ಕೇರಳದಲ್ಲಿ ರಸ್ತೆಗಳು ಸಂಪೂರ್ಣವಾಗಿ ಮುಳುಗಿ ಹೋಗಿವೆ. ರಸ್ತೆಯ ಮೇಲೆ ಮೊಣಕಾಲುದ್ದ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದಾಗಿದ್ದಾರೆ.

— All India Radio News (@airnewsalerts) May 28, 2024

ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯಲ್ಲಿ ಭಾರೀ ಅವಾಂತರ ಸಂಭವಿಸಿದೆ. ಮಳೆ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿ, ಜನರು ಕಂಗಾಲಾಗಿದ್ದಾರೆ. ಇನ್ನು ಪ್ರವಾಹದಲ್ಲಿ ಸಿಲುಕಿದ್ದವರನ್ನು ಬೋಟ್​ಗಳ ಮೂಲಕ ರಕ್ಷಣೆ ಮಾಡಲಾಗಿದೆ.